ಮೇಕೆದಾಟು ಅನುಮತಿ ರದ್ದು ಮಾಡಲು ಸುಪ್ರೀಂ ನಕಾರ; ತಮಿಳುನಾಡಿಗೆ ಮುಖಭಂಗ

6,656

ಮೇಕೆದಾಟು ಯೋಜನೆ ಕುರಿತು ಕರ್ನಾಟಕದ ಜೊತೆ ಮಾತುಕತೆಗೆ ಸಿದ್ದವಿಲ್ಲ ಎಂದು ತಮಿಳುನಾಡು ಸರ್ಕಾರ ಪತ್ರ ಬರೆದು ಕ್ಯಾತೆ ತೆಗೆದಿದ್ದ ಬೆನ್ನಲ್ಲೇ ಮೇಕೆದಾಟು ಅಣೆಕಟ್ಟು ಯೋಜನೆಗೆ ಕೇಂದ್ರ ಸರ್ಕಾರ ನೀಡಿರುವ ಅನುಮತಿಯನ್ನು ರದ್ದು ಮಾಡಬೇಕೆಂದು ಕೋರಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಬುಧವಾರ ವಜಾಗೊಳಿಸಿದೆ. ಇದರೊಂದಿಗೆ ತಮಿಳುನಾಡಿಗೆ ಹಿನ್ನಡೆ ಉಂಟಾಗಿದೆ.

ಮೇಕೆದಾಟು ಯೋಜನೆಗೆ ಸಂಬಂಧಿಸಿದ ತಕರಾರು ಅರ್ಜಿಯನ್ನು ತಿರಸ್ಕರಿಸಿರುವ ಸುಪ್ರೀಂಕೋರ್ಟ್, ನಾಲ್ಕು ವಾರಗಳಲ್ಲಿ ಉತ್ತರ ನೀಡುವಂತೆ ಕೇಂದ್ರ ಜಲಸಂಪನ್ಮೂಲ ಆಯೋಗಕ್ಕೆ ಸೂಚಿಸಿದೆ.
ಇತ್ತೀಚೆಗೆ ಮೇಕೆದಾಟು ಅಣೆಕಟ್ಟು ಯೋಜನೆಗೆ ಸಂಬಂಧಿಸಿದಂತೆ ವಿಸ್ತೃತ ಯೋಜನಾ ವರದಿ(ಡಿಪಿಆರ್) ಸಲ್ಲಿಸುವಂತೆ ಕರ್ನಾಟಕ ಸರಕಾರಕ್ಕೆ ಕೇಂದ್ರ ಜಲ ಆಯೋಗ ಅನುಮತಿ ನೀಡಿರುವುದಕ್ಕೆ ತಮಿಳುನಾಡು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಆಕ್ಷೇಪ ವ್ಯಕ್ತಪಡಿಸಿತ್ತು. ಅಲ್ಲದೇ ಸುಪ್ರೀಂಕೋರ್ಟ್ ಆದೇಶವನ್ನು ಉಲ್ಲಂಘಿಸಿ ಡಿಪಿಆರ್ ತಯಾರಿಸಲು ಅನುಮತಿ ಪಡೆದುಕೊಳ್ಳಲಾಗಿದೆ ಎಂದು ತಮಿಳುನಾಡು ಆರೋಪಿಸಿತ್ತು.

Leave A Reply

Your email address will not be published.