‘ಸಂಪುಟ ವಿಸ್ತರಣೆ’ಗೆ ದಿನಾಂಕ ನಿಗದಿ ಬೆನ್ನಲ್ಲೇ ಗರಿಗೆದರಿದ ಚಟುವಟಿಕೆ

7,937

ದೋಸ್ತಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕೊನೆಗೂ ಸಚಿವ ಸಂಪುಟ ವಿಸ್ತರಣೆಗೆ ದಿನಾಂಕ ನಿಗದಿಯಾಗಿದೆ. ಹಲವು ಬಾರಿ ದಿನಾಂಕ ಘೋಷಿಸಿದ್ದರೂ ವಿವಿಧ ಕಾರಣ ಹೇಳಿ ಅದನ್ನು ಮುಂದೂಡುತ್ತಲೇ ಬಂದಿದ್ದ ಕಾಂಗ್ರೆಸ್-ಜೆಡಿಎಸ್ ನಾಯಕರು ಇದೀಗ ಡಿಸೆಂಬರ್ 22 ಕ್ಕೆ ಮುಹೂರ್ತ ನಿಗದಿಪಡಿಸಿದ್ದಾರೆ.

ಸಂಪುಟ ವಿಸ್ತರಣೆಗೆ ದಿನಾಂಕ ಖಚಿತವಾಗುತ್ತಿದ್ದಂತೆಯೇ ಸಚಿವಾಕಾಂಕ್ಷಿ ಶಾಸಕರುಗಳ ಚಟುವಟಿಕೆ ಗರಿಗೆದರಿದೆ. ಹೈಕಮಾಂಡ್ ಮಟ್ಟದಲ್ಲಿ ತಮಗಿರುವ ಪ್ರಭಾವವನ್ನು ಬಳಸಿಕೊಂಡು ಕೆಲ ಕಾಂಗ್ರೆಸ್ ಶಾಸಕರು ಸಚಿವಗಿರಿಗಾಗಿ ಲಾಬಿ ಮಾಡುತ್ತಿದ್ದಾರೆ.

ಇನ್ನು ಜೆಡಿಎಸ್ ನಲ್ಲಿ ದೇವೇಗೌಡರ ತೀರ್ಮಾನವೇ ಅಂತಿಮವಾಗಿದ್ದರೂ ಒತ್ತಡ ಹೇರುವ ಮೂಲಕ ಸಚಿವ ಸ್ಥಾನ ಪಡೆಯಲು ಜೆಡಿಎಸ್ ಶಾಸಕರುಗಳು ಮುಂದಾಗಿದ್ದಾರೆ. ಸಂಪುಟ ವಿಸ್ತರಣೆ ಜೊತೆಗೆ ನಿಗಮ-ಮಂಡಳಿಗಳ ಅಧ್ಯಕ್ಷರ ನೇಮಕಾತಿ ನಡೆಯಲಿದೆ ಎನ್ನಲಾಗಿದ್ದು, ಈ ಮೂಲಕ ಸಚಿವ ಸ್ಥಾನ ವಂಚಿತ ಶಾಸಕರ ಅಸಮಾಧಾನ ಶಮನ ಮಾಡಲು ನಾಯಕರು ಮುಂದಾಗಿದ್ದಾರೆ.

Leave A Reply

Your email address will not be published.