ಸಂಪುಟ ವಿಸ್ತರಣೆ : ಕರ್ನಾಟಕ ನಾಯಕರಿಗೆ ರಾಹುಲ್ ಗಾಂಧಿ ಕರೆ

9,044

ಬೆಂಗಳೂರು, ಡಿಸೆಂಬರ್ 14 : ಸಚಿವ ಸಂಪುಟ ವಿಸ್ತರಣೆಗೆ ಕರ್ನಾಟಕ ಕಾಂಗ್ರೆಸ್‌ ಸಿದ್ಧವಾಗುತ್ತಿದೆ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ದೆಹಲಿಗೆ ಬರುವಂತೆ ಕರ್ನಾಟಕದ ಪಕ್ಷದ ನಾಯಕರಿಗೆ ಸೂಚನೆ ನೀಡಿದ್ದಾರೆ.

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಮುಗಿದ ಬಳಿಕ ರಾಹುಲ್ ಗಾಂಧಿ ಅವರು ಮುಖ್ಯಮಂತ್ರಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಬ್ಯುಸಿಯಾಗಿದ್ದರು. ಈಗ ಎಲ್ಲಾ ಕೆಲಸಗಳು ಪೂರ್ಣಗೊಂಡಿದ್ದು, ರಾಜ್ಯ ನಾಯಕರ ಭೇಟಿಗೆ ಸಮಯ ನೀಡಿದ್ದಾರೆ.

ಡಿಸೆಂಬರ್ 21ರಂದು ಸಂಪುಟ ವಿಸ್ತರಣೆ ಕುರಿತು ದೆಹಲಿಯಲ್ಲಿ ಸಭೆ ನಡೆಯಲಿದೆ. ಡಿಸೆಂಬರ್‌ 22ರಂದು ಸಂಪುಟ ವಿಸ್ತರಣೆಗೆ ದಿನಾಂಕ ನಿಗದಿಯಾಗಿದೆ. ಕರ್ನಾಟಕದ ಕಾಂಗ್ರೆಸ್ ನಾಯಕರು ಸಂಪುಟ ಸೇರುವ ಶಾಸಕರ ಪಟ್ಟಿಯನ್ನು ಹಿಡಿದು ದೆಹಲಿ ವಿಮಾನ ಹತ್ತಲಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ರಾಹುಲ್ ಗಾಂಧಿ ಜೊತೆಗಿನ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ…

Leave A Reply

Your email address will not be published.