ಡಿಸೆಂಬರ್ 22ಕ್ಕೆ ಸಂಪುಟ ವಿಸ್ತರಣೆ ಖಚಿತ : ಮಾಜಿ ಸಿಎಂ ಸಿದ್ದರಾಮಯ್ಯ

7,591

ಸಚಿವ ಸಂಪುಟ ವಿಸ್ತರಣೆಗೆ ಡೇಟ್ ಫಿಕ್ಸ್ ಆಗಿದ್ದು, ಡಿಸೆಂಬರ್ 22 ಕ್ಕೆ ಸಚಿವ ಸಂಪುಟ ವಿಸ್ತರಣೆ ನಡೆಯುವುದು ಖಚಿತ ಎಂದು ಸಿಎಲ್ ಪಿ ಅಧ್ಯಕ್ಷ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಸಂಪುಟ ವಿಸ್ತರಣೆ ಬಗ್ಗೆ ಹಲವು ಶಾಸಕರು ಅಸಮಾಧಾನ ಹೊರಹಾಕಿದರು. ಸಂಪುಟ ವಿಸ್ತರಣೆ ಪದೇ ಪದೇ ನೆಪವೊಡ್ಡಿ ಮುಂದೂಡಲಾಗುತ್ತಿದೆ. ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಈ ವೇಳೆ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು, ನೂರಕ್ಕೆ ನೂರು ಡಿಸೆಂಬರ್ 22 ಕ್ಕೆ ಸಚಿವ ಸಂಪುಟ ವಿಸ್ತರಣೆ ಆಗಲಿದೆ ಜೊತೆಗೆ ನಿಗಮ-ಮಂಡಳಿಗಳಿಗೆ ಶಾಸಕರ ನೇಮಕ ಆಗಲಿದೆ ಎಂದು ಹೇಳಿದರು.

ಕೆಲವು ಕ್ಷೇತ್ರಗಳ ಸಮಸ್ಯೆಗಳ ಬಗ್ಗೆ ಶಾಸಕರುಉ ತೋಡಿಕೊಂಡಿದ್ದಾರೆ. ಅದನ್ನು ಸಿಎಂ ಬಳಿ ಚರ್ಚೆ ಮಾಡುತ್ತೇವೆ. ರಮೇಶ್ ಜಾರಕಿಹೊಳಿ, ರಾಮಲಿಂಗ ರೆಡ್ಡಿ ಅವರು ಸಭೆಗೆ ಬಂದಿಲ್ಲ. ಸಂಪುಟ ವಿಸ್ತರಣೆ ಡಿಸೆಂಬರ್ 22 ಕ್ಕೆ ಆಗುವುದು ಖಚಿತ ಎಂದರು.

Leave A Reply

Your email address will not be published.