ವಾಜಪೇಯಿ ಸ್ಮರಣಾರ್ಥ 100 ರೂ. ನಾಣ್ಯ ಬಿಡುಗಡೆ

7,769

ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರ 94ನೇ ಜನ್ಮದಿನದ (ಡಿ.25) ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಇಂದು ರಾಜಧಾನಿ ದೆಹಲಿಯಲ್ಲಿ ಅವರ ಸ್ಮರಣಾರ್ಥ 100 ರೂ.ಗಳ ನಾಣ್ಯ ಬಿಡುಗಡೆ ಮಾಡಿದರು.

ಈ ಕಾರ್ಯಕ್ರಮದಲ್ಲಿ ಮಾಜಿ ಉಪ ಪ್ರಧಾನಿ ಎಲ್.ಕೆ.ಅಡ್ವಾಣಿ, ಲೋಕಸಭಾಧ್ಯಕ್ಷೆ ಸುಮಿತ್ರಾ ಮಹಾಜನ್, ಹಣಕಾಸು ಸಚಿವ ಅರುಣ್ ಜೇಟ್ಲಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮೊದಲಾದವರು ಪಾಲ್ಗೊಂಡರು.

100 ರೂ.ಗಳ ನಾಣ್ಯ ಬಿಡುಗಡೆಗೊಳಿಸಿ ಮಾತನಾಡಿದ ಮೋದಿ, ವಾಜಪೇಯಿ ಅವರ ತತ್ವಾದರ್ಶ ಮತ್ತು ಅವರು ತೋರಿಸಿಕೊಟ್ಟ ಸನ್ಮಾರ್ಗದಲ್ಲಿ ಸಾಗಲು ನಾವೆಲ್ಲರೂ ದೃಢಸಂಕಲ್ಪ ಮಾಡೋಣ ಎಂದರು. ಮಾಜಿ ಪ್ರಧಾನಿ ವಾಜಪೇಯಿ ಅವರು ದೀರ್ಘಕಾಲದ ಅನಾರೋಗ್ಯದಿಂದಾಗಿ ದೆಹಲಿಯಲ್ಲಿ ಆಗಸ್ಟ್‍ನಲ್ಲಿ ನಿಧನರಾದರು.

Leave A Reply

Your email address will not be published.