ಸಂಪುಟ ವಿಸ್ತರಣೆ ಬಳಿಕ ಅತೃಪ್ತ ಶಾಸಕರಿಗೆ ಕಾಂಗ್ರೆಸ್‌ನಿಂದ ಎಚ್ಚರಿಕೆ!

5,479

ಬೆಂಗಳೂರು, ಡಿಸೆಂಬರ್ 24 : ಸಚಿವ ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನ ಉಂಟಾಗಿದೆ. ಅತೃಪ್ತ ಶಾಸಕರಿಗೆ ಪಕ್ಷ ಎಚ್ಚರಿಕೆ ನೀಡಿದ್ದು, ಪಕ್ಷ ವಿರೋಧಿ ಚುಟುವಟಿಕೆಯಲ್ಲಿ ಪಾಲ್ಗೊಂಡರೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ.

ಸಂಪುಟ ವಿಸ್ತರಣೆ ಬಳಿಕ ರಮೇಶ್ ಜಾರಕಿಹೊಳಿ, ರಾಮಲಿಂಗಾ ರೆಡ್ಡಿ ಮತ್ತು ಅವರ ಬೆಂಬಲಿಗರು ಸೇರಿದಂತೆ ಹಲವು ನಾಯಕರುಸ ಅಸಮಾಧಾನಗೊಂಡಿದ್ದಾರೆ. ಈ ನಾಯಕರು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗದಂತೆ ಸೂಚನೆ ನೀಡಲಾಗಿದೆ.

ಸಂಪುಟ ವಿಸ್ತರಣೆ ಅಸಮಾಧಾನ, ಕಾಂಗ್ರೆಸ್ ನಾಯಕರು ಹೇಳಿದ್ದೇನು?

ವಿ.ಆರ್.ಸುದರ್ಶನ್ ನೇತೃತ್ವದಲ್ಲಿ ಪಕ್ಷ ಸಮಿತಿಯನ್ನು ರಚನೆ ಮಾಡಿದೆ. ಪಕ್ಷ ವಿರೋಧಿ ಚಟುವಟಿಕೆ ನಡೆಸುವ ನಾಯಕರ ಪಟ್ಟಿಯನ್ನು ಈ ಸಮಿತಿ ಮಾಡಲಿದ್ದು, ಶಿಸ್ತು ಕ್ರಮ ಕೈಗೊಳ್ಳುವಂತೆ ಪಕ್ಷದ ವರಿಷ್ಠರಿಗೆ ಶಿಫಾರಸು ಮಾಡಲಿದೆ.

ಎಚ್.ಡಿ.ಕುಮಾರಸ್ವಾಮಿ ಸಂಪುಟ, ಜಿಲ್ಲಾ ಮತ್ತು ಜಾತಿ ಪ್ರಾತಿನಿಧ್ಯ

ಅತೃಪ್ತ ಶಾಸಕರು 2019ರ ಲೋಕಸಭಾ ಚುನಾವಣೆಯಲ್ಲಿಯೂ ಪಕ್ಷ ವಿರೋಧಿ ಚಟುವಟಿಕೆ ನಡೆಸದಂತೆ ಸೂಚನೆ ನೀಡಿದೆ. ಕಾಂಗ್ರೆಸ್ ಹೈಕಮಾಂಡ್ ಅತೃಪ್ತ ಶಾಸಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕಟ್ಟು ನಿಟ್ಟಿನ ಸೂಚನೆಯನ್ನು ರಾಜ್ಯ ನಾಯಕರಿಗೆ ನೀಡಿದೆ.

3 ದಿನಗಳಲ್ಲಿ ಶಾಸಕ ಸ್ಥಾನಕ್ಕೆ ರಮೇಶ್ ರಾಜೀನಾಮೆ: ಸ್ಪಷ್ಟನೆ

‘ಸಂಪುಟ ಪುನಾರಚನೆ ಆದ ಬಳಿಕ ರಮೇಶ್ ಜಾರಕಿಹೊಳಿ ಅವರಿಗೆ ಅಸಮಾಧಾನ ಆಗಿರುವುದು ನಿಜ. ಅವರು ಹಿರಿಯ ನಾಯಕರು ಪಕ್ಷದ ನಾಯಕರು ಅವರ ಜೊತೆ ಮಾತನಾಡುತ್ತಾರೆ. ಲೋಕಸಭೆ ಚುನಾವಣೆ ಬಳಿಕ ಪುನಃ ಸಂಪುಟ ಪುನಾರಚನೆ ಆಗಲಿದೆ’ ಎಂದು ನೂತನ ಸಚಿವ ರಹೀಂ ಖಾನ್ ಹೇಳಿದ್ದಾರೆ.

ಕರ್ನಾಟಕ ಕಾಂಗ್ರೆಸ್‌ನ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಅವರು ಅಸಮಧಾನದ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ‘ರಮೇಶ್ ಜಾರಕಿಹೊಳಿ ಅವರಿಗೆ ಸ್ಪಲ್ಪ ಸಮಸ್ಯೆ ಆಗಿದೆ. ನಾನು ಅವರ ಜೊತೆ ಮಾತನಾಡುತ್ತೇನೆ. ಆಸೆಗಳು ಎಲ್ಲರಿಗೂ ಇರುತ್ತವೆ. ಅದು ತಪ್ಪಲ್ಲ, ಪಕ್ಷ ಉಳಿದರೆ ನಾವೆಲ್ಲ ಉಳಿಯುತ್ತೇವೆ’ ಎಂದು ಹೇಳಿದರು.

Leave A Reply

Your email address will not be published.