ಇಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ದೆಹಲಿಗೆ ಭೇಟಿ

3,499

ಬೆಂಗಳೂರು : ಇಂದು ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯದ ಅಭಿವೃದ್ಧಿ ಯೋಜನೆಗಳ ಬಗ್ಗೆ ಕೇಂದ್ರದ ಸಚಿವರೊಂದಿಗೆ ಚರ್ಚೆ ನಡೆಸಲು ದೆಹಲಿಗೆ ಪ್ರಯಾಣ ಬೆಳಸಲಿದ್ದಾರೆ.

ಎರಡು ದಿನಗಳ ದೆಹಲಿ ಪ್ರವಾಸದಲ್ಲಿ ಇಂದು ಸಿಎಂ ಕೇಂದ್ರ ಜಲಸಂಪನ್ಮೂಲ, ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಖಾತೆ ಸಚಿವ ನಿತೀನ್ ಗಡ್ಕರಿ ಅವರನ್ನು ಭೇಟಿ ಮಾಡಿ ರಾಜ್ಯದ ಹೆದ್ದಾರಿ ಹಾಗೂ ನೀರಾವರಿ ಯೋಜನೆಗಳ ಬಗ್ಗೆ ಮಾತುಕತೆ ನಡೆಸಲಿದ್ದಾರೆ.

ಈ ನಡುವೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಸಿಎಂ ಹೆಚ್ಡಿಕೆ ಭೇಟಿ ಮಾಡಲಿದ್ದಾರೆ ಎನ್ನಲಾಗಿದ್ದು, ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಕಾಂಗ್ರೆಸ್ ಶಾಸಕ ಕೆ.ಎಚ್. ಮುನಿಯಪ್ಪ ಅವರ ಹೆಸರನ್ನು ಕಾಂಗ್ರೆಸ್ ಶಿಫಾರಸು ಮಾಡಿರುವುದು ಮತ್ತು ನಿಮಗ ಮಂಡಳಿಗಳ ನೇಮಕ ಪ್ರಕ್ರಿಯೆಯಲ್ಲಿ ತಮ್ಮನ್ನು ಕಡೆಗಣಿಸಿರುವ ಬಗ್ಗೆ ಕುಮಾರಸ್ವಾಮಿ ಅವರು ರಾಹುಲ್ ಗಾಂಧಿ ಬಳಿ ಅಸಮಾಧಾನ ಹೊರಹಾಕಲಿದ್ದಾರೆ ಎಂದು ಹೇಳಲಾಗುತ್ತಿದೆ.

Leave A Reply

Your email address will not be published.