ಎಸ್.ಬಿ.ಐ. ಗ್ರಾಹಕರಿಗೆ ಇಲ್ಲಿದೆ “ಗುಡ್ ನ್ಯೂಸ್”

7,988

ಭಾರತೀಯ ಸ್ಟೇಟ್ ಬ್ಯಾಂಕ್(ಎಸ್.ಬಿ.ಐ.) ಗ್ರಾಹಕರಿಗೆ ಇಲ್ಲಿದೆ ಒಂದು ಮಾಹಿತಿ. ಎಸ್.ಬಿ.ಐ. ಗ್ರಾಹಕರ ಹಿತದೃಷ್ಠಿಯಿಂದ ನಗದು ಠೇವಣಿ, ಎಟಿಎಮ್ ಸೇವೆಗಳಿಗೆ ಕಡಿಮೆ ಶುಲ್ಕ ನಿಗದಿ ಮಾಡಿದೆ ಎಂದು ಬ್ಯಾಂಕ್ ನ ವ್ಯವಸ್ಥಾಪಕ ನಿರ್ದೇಶಕ ಪಿ.ಕೆ. ಗುಪ್ತಾ ತಿಳಿಸಿದ್ದಾರೆ.

ಬ್ಯಾಂಕಿಂಗ್ ಉದ್ಯಮದಲ್ಲಿ ಭಾರತೀಯ ಸ್ಟೇಟ್ ಬ್ಯಾಂಕ್ ವಿವಿಧ ಸೇವೆಗಳಿಗಾಗಿ ಅತ್ಯಂತ ಕಡಿಮೆ ಶುಲ್ಕ ವಿಧಿಸುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಎಟಿಎಂ ನಿರ್ವಹಣೆ ವೆಚ್ಚ ದುಬಾರಿಯಾಗುತ್ತಿರುವ ಹಿನ್ನೆಲೆಯಲ್ಲಿ ಡಿಜಿಟಲ್ ಬ್ಯಾಂಕಿಂಗ್ ವ್ಯವಸ್ಥೆಯನ್ನು ಬಳಸಿಕೊಳ್ಳಲು ಗ್ರಾಹಕರಿಗೆ ತಿಳಿಸಲಾಗುತ್ತಿದೆ. ಅಲ್ಲದೆ, ಗ್ರಾಹಕರಿಗೆ ರಿವಾರ್ಡ್ ಪಾಯಿಂಟ್ ನೀಡಲಾಗುತ್ತಿದೆ ಎಂದಿದ್ದಾರೆ.

ಮೂಲಸೌಕರ್ಯ ಮತ್ತು ತಂತ್ರಜ್ಞಾನ ಅಳವಡಿಸಲು ಹೆಚ್ಚು ಹೂಡಿಕೆ ಮಾಡುತ್ತಿದ್ದು, ಈ ಕಾರಣಕ್ಕೆ ವೆಚ್ಚದ ಒಂದು ಭಾಗವನ್ನು ಮರಳಿ ಪಡೆಯಲಾಗುತ್ತಿದೆ ಎಂದು ಹೇಳಿದ್ದಾರೆ. ಖಾತೆಯಲ್ಲಿ ಮಿನಿಮಮ್ ಬ್ಯಾಲೆನ್ಸ್ ಇಲ್ಲದ ಗ್ರಾಹಕರಿಗೆ ವಿಧಿಸುತ್ತಿರುವ ಶುಲ್ಕವನ್ನು ಕಡಿಮೆ ಮಾಡಲಾಗುತ್ತದೆಯೇ ಎಂಬ ಪ್ರಶ್ನೆಗೆ ಅವರು ಮೇಲಿನಂತೆ ಪ್ರತಿಕ್ರಿಯೆ ನೀಡಿದ್ದಾರೆ.

Leave A Reply

Your email address will not be published.