ಸಿದ್ದರಾಮಯ್ಯ ಮತ್ತೆ ಸಿಎಂ ಆಗುವ ಕನಸು ಕಾಣುತ್ತಿದ್ದಾರೆ : ಕೆ.ಎಸ್. ಈಶ್ವರಪ್ಪ

4,401

ಬಾಗಲಕೋಟೆ : ಸಿದ್ದರಾಮಯ್ಯ ತಾವು ಮತ್ತೆ ಮುಖ್ಯಮಂತ್ರಿ ಆಗಬೇಕೆಂದು ಕನಸು ಕಾಣುತ್ತಿದ್ದಾರೆ. ಹಾಗಾಗಿ ಸರ್ಕಾರದಲ್ಲಿ ಅರಾಜಕತೆ ಸೃಷ್ಠಿಸುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಕೆ.ಎಸ್. ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕಾಂಗ್ರೆಸ್ ನ ಅತೃಪ್ತ ಆತ್ಮಗಳ ನಾಯಕ, ವಿಧಾನಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲನುಭವಿಸಿದ್ದರು. ಅವರಿಗೆ ಸೋಲಿನ ಹೊಟ್ಟೆ ಉರಿ ಕಡಿಮೆಯಾಗಿಲ್ಲ ಎಂದರು.

ಸಿಎಂ ಹೆಚ್.ಡಿ. ಕುಮಾರಸ್ವಾಮಿ ಮತ್ತು ಗೂಂಡಾಗಳಿಗೆ ಏನೂ ವ್ಯತ್ಯಾಸವಿಲ್ಲ. ಅವರು ಮುಖ್ಯಮಂತ್ರಿಯಾಗಲು ಯೋಗ್ಯರಲ್ಲ. ರಾಜ್ಯದಲ್ಲಿ ಈ ಹಿಂದೆ ಇದ್ದ 22 ಹಿಂದು ಕಾರ್ಯಕರ್ತರ ಹತ್ಯೆ ಆಗಿತ್ತು. ಆಗ ಹೆಚ್ಡಿಕೆ ಮೌನವಾಗಿದ್ದರು. ಸಿಎಂ ತಮ್ಮ ಹೇಳಿಕೆಗೆ ರಾಜ್ಯದ ಜನರು ಕ್ಷಮೆ ಕೇಳಬೇಕು ಎಂದು ಈಶ್ವರಪ್ಪ ಒತ್ತಾಯಿಸಿದ್ದರು.

Leave A Reply

Your email address will not be published.