ಶಾಸಕ ಸುಧಾಕರ್ ಗೆ ಬಿಗ್ ಶಾಕ್ : ಮಾಲಿನ್ಯ ಮಂಡಳಿ ಅಧ್ಯಕ್ಷ ಸ್ಥಾನದಿಂದ ಕೋಕ್!?

3,311

ಬೆಂಗಳೂರು: ಸಂಪುಟ ವಿಸ್ತರಣೆ ಕಗ್ಗಂಟು, ಖಾತೆ ಹಂಚಿಕೆ ಬಿಕ್ಕಟ್ಟು ಮುಗಿದ ನಂತರ ಈಗ ಶಾಸಕ ಸುಧಾಕರ್‌ಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನದಿಂದಲೇ ಕೊಕ್‌ ನೀಡಲಾಗಿದೆ ಎನ್ನಲಾಗಿದೆ.

ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರಿಂದಲೇ ನನಗೆ ಈ ಹುದ್ದೆ ತಪ್ಪಿದೆ ಎಂಬುದು ಗೊತ್ತಾಗಿದೆ. ರಾಹುಲ್‌ ಗಾಂಧಿ ಅವರೇ ನನ್ನ ಹೆಸರನ್ನು ಕ್ಲಿಯರ್‌ ಮಾಡಿದ್ದರು. ಆದರೆ ಕುಮಾರಸ್ವಾಮಿ ದಿಲ್ಲಿಯಲ್ಲಿ ರಾಹುಲ್‌ ಅವರನ್ನು ಭೇಟಿ ಮಾಡಿದ ನಂತರ ಎಲ್ಲವೂ ಬದಲಾಗಿದೆ ಎಂದು ಶಾಸಕರು ಹೇಳಿದ್ದಾರೆ ಎನ್ನಲಾಗಿದೆ.

ಇನ್ನು ನಿಗಮ ಮಂಡಳಿ ಅಧ್ಯಕ್ಷ ಸ್ಥಾನದಿಂದ ನನಗೆ ಕೊಕ್‌ ನೀಡಿ ಚಿಕ್ಕಬಳ್ಳಾಪುರ ಜನತೆಗೆ ಮೋಸ ಮಾಡಲಾಗಿದೆ. ಎಲ್ಲಕ್ಕಿಂತ ಮುಖ್ಯವಾಗಿ ನನ್ನ ಆತ್ಮಗೌರವಕ್ಕೆ ಚ್ಯುತಿ ತರಲಾಗಿದೆ. ಕ್ಷೇತ್ರದ ಜನರ ಜತೆ ಚರ್ಚಿಸಿ ಮುಂದಿನ ಕೆಲವೇ ದಿನಗಳಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಶಾಸಕ ಸುಧಾಕರ್ ಸ್ಪಷ್ಟಪಡಿಸಿದರು.

Leave A Reply

Your email address will not be published.