ನಾನು ಸಂಚರಿಸುವ ಮಾರ್ಗದಲ್ಲಿ ಸಂಚಾರ ನಿರ್ಬಂಧ ಬೇಡ: ಗೃಹ ಸಚಿವ ಎಂ.ಬಿ.ಪಾಟೀಲ್

4,975

ಬೆಂಗಳೂರು, ಜ. 4: ‘ನಾನು ಸಂಚರಿಸುವ ಮಾರ್ಗದಲ್ಲಿ ಸಂಚಾರ ನಿರ್ಬಂಧ ಬೇಡ. ಸಾರ್ವಜನಿಕರಂತೆ ನಾನು ಸಂಚಾರ ನಿಯಮಗಳನ್ನು ಪಾಲಿಸುತ್ತೇನೆ’ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ಸರಳತೆಗೆ ಸಾಕ್ಷಿಯಾಗಿದ್ದಾರೆ.

‘ಪ್ರತಿನಿತ್ಯ ನಾನು ಸಂಚರಿಸುವ ಮಾರ್ಗದಲ್ಲಿ ಯಾವುದೇ ಕಾರಣಕ್ಕೂ ಸಂಚಾರ ನಿರ್ಬಂಧ ವ್ಯವಸ್ಥೆ ಮಾಡಬೇಡಿ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಇದು ನನಗೆ ಇಷ್ಟವಿಲ್ಲ. ಸಾರ್ವಜನಿಕರಂತೆ ನಾನು ಸಂಚಾರ ನಿಯಮ ಪಾಲಿಸುತ್ತೇನೆ’ ಎಂದು ಪಾಟೀಲ್ ಹೇಳಿದ್ದಾರೆ.

ನಾನು ವಾಸ್ತವ್ಯದ ಸ್ಥಳದಲ್ಲಿ ಮತ್ತು ಕಾರ್ಯಕ್ರಮಗಳ ಸ್ಥಳಗಳಲ್ಲಿ ರಕ್ಷಣೆಗಾಗಿ ಅನಾವಶ್ಯಕವಾಗಿ ಸಿಬ್ಬಂದಿಯನ್ನು ನಿಯೋಜನೆ ಮಾಡುವುದು ಬೇಡ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ಸೂಚನೆ ನೀಡಿದ್ದಾರೆಂದು ಗೊತ್ತಾಗಿದ್ದು, ಹೀಗಾಗಿ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಕಮಲ್‌ ಫಂತ್, ಎಲ್ಲ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಗಳಿಗೆ(ಎಸ್ಪಿ) ಆದೇಶ ಹೊರಡಿಸಿದ್ದಾರೆ.

Leave A Reply

Your email address will not be published.