ಲೋಕಸಭೆ ಚುನಾವಣೆಗೆ ಸ್ಪರ್ಧೆ ಇಲ್ಲ : ಬಿ.ವೈ ವಿಜಯೇಂದ್ರ ಸ್ಪಷ್ಟನೆ

4,565

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ವೈ ವಿಜಯೇಂದ್ರ ಹೇಳಿದ್ದಾರೆ.

ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಲೋಕಸಭೆ ಚುನಾವಣೆಗೆ ಎಷ್ಟೇ ಒತ್ತಡ ಬಂದರೂ ನಾನು ಸ್ಪರ್ಧಿಸುವುದಿಲ್ಲ. ರಾಜ್ಯದಿಂದ ಅತಿ ಹೆಚ್ಚು ಲೋಕಸಭೆ ಸದಸ್ಯರನ್ನು ಆಯ್ಕೆ ಮಾಡಲು ಶ್ರಮಿಸುವುದಾಗಿ ಹೇಳಿದ್ದಾರೆ.

ಇನ್ನು ರಾಜ್ಯದ ಬರ ನಿರ್ವಹಣೆಯಲ್ಲಿ ಕಾಂಗ್ರೆಸ್ ಜೆಡಿಎಸ್ ಸಮ್ಮಿಶ್ರ ಸರ್ಕಾರ ವಿಫಲವಾಗಿದೆ. ಬೆಳಗಾವಿ ಅಧಿವೇಶನದಲ್ಲೂ ಸಮರ್ಪಕ ಚರ್ಚೆಯಾಗಿಲ್ಲ. ರಾಜ್ಯದ ಜನರ ಅಶೋತ್ತರಗಳಿಗೆ ಸ್ಪಂದಿಸದ ಸರ್ಕಾರದ ವಿರುದ್ಧ ಮತದಾರರಲ್ಲಿ ಆಕ್ರೋಶವಿದೆ. ಇದು ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ವರದಾನವಾಗಲಿದೆ ಎಂದರು.

Leave A Reply

Your email address will not be published.