ಜ.15ರಂದು ಮತದಾರರ ಅಂತಿಮ ಪಟ್ಟಿ ಪ್ರಕಟ

8,867

ಜ.15ರಂದು 224 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುವುದು ಎಂದು ಮುಖ್ಯ ಚುನಾವಣಾಧಿಕಾರಿ ಕಚೇರಿ ತಿಳಿಸಿದೆ.

ಮತದಾರರ ಪಟ್ಟಿಯ ಪರಿಷ್ಕರಣೆಗೆ ಸಂಬಂಧಿಸಿದಂತೆ ಜ.15 ರಂದು 224 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಅಂತಿಮ ಮತದಾರರ ಪಟ್ಟಿ ಫೈನಲ್ ಮಾಡಲಾಗುತ್ತದೆ.

ಜಿಲ್ಲಾಧಿಕಾರಿಗಳ ಕಚೇರಿ, ಮತದಾರರ ನೋಂದಣಾಧಿಕಾರಿ ಕಚೇರಿ, ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಚೇರಿ ಹಾಗೂ ಕ್ಷೇತ್ರದ ವ್ಯಾಪ್ತಿಯ ಮತಗಟ್ಟೆಗಳಲ್ಲಿ ಪಟ್ಟಿ ಪ್ರಕಟಿಸಲಾಗುತ್ತದೆ. ಮುಖ್ಯ ಚುನಾವಣಾಧಿಕಾರಿ ಕಚೇರಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟವಾಗಲಿದೆ ಎಂದು ತಿಳಿದು ಬಂದಿದೆ.

Leave A Reply

Your email address will not be published.