ಶಾಸಕ ಗೂಳಿಹಟ್ಟಿ ಶೇಖರ್ ಆರೋಗ್ಯ ವಿಚಾರಿಸಿದ ಬಿಎಸ್ ವೈ

3,970

ಶಿವಮೊಗ್ಗ : ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿರುವ ಶಾಸಕ ಗೂಳಿಹಟ್ಟಿ ಶೇಖರ್ ಅವರನ್ನು ಭೇಟಿ ಮಾಡಿ ಬಿಎಸ್ ಯಡಿಯೂರಪ್ಪ ಆರೋಗ್ಯ ವಿಚಾರಿಸಿದ್ದಾರೆ.

ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್ ಅವರು ಮರಳು ಸಿಗುತ್ತಿಲ್ಲ ಎಂದು ಆರೋಪಿಸಿ ನಿನ್ನೆ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಅವರ ಕಣ್ಣಿಗೆ ಪೆಟ್ರೋಲ್ ಹೋಗಿದ್ದ ಪರಿಣಾಮ ಶಂಕರ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಘಟನೆಯ ಸಂಪೂರ್ಣ ಮಾಹಿತಿ ಪಡೆದ ಬಿಎಸ್ ವೈ ಇಂದು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಬಳಿಕ ಮಾತನಾಡಿದ ಅವರು, ಒಬ್ಬ ಶಾಸಕರ ಸ್ಥಿತಿಯೇ ಹೀಗಾದರೆ ಸಾಮಾನ್ಯ ಜನರ ಪರಿಸ್ಥಿತಿ ಏನು? ಕಾಂಗ್ರೆಸ್ ಏಜೆಂಟರೇ ಮರಳು ದಂಧೆಯಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿದರು.

Leave A Reply

Your email address will not be published.