ಶಿಕ್ಷಣ ಗುಣಮಟ್ಟ ಹೆಚ್ಚಿಸಲು ಕೇಂದ್ರ ಸರ್ಕಾರದಿಂದ ಹೊಸ ಯೋಜನೆ

4,423

ಶಿಕ್ಷಣ ಕ್ಷೇತ್ರದಲ್ಲಿ ಗುಣಮಟ್ಟ ಹೆಚ್ಚಿಸಲು ಮಾನವ ಸಂಪನ್ಮೂಲ ಸಚಿವಾಲಯ ಹೊಸ ಯೋಜನೆ ಜಾರಿಗೆ ಚಿಂತನೆ ನಡೆಸಿದೆ.

ಶಾಲಾ ಶಿಕ್ಷಣದ ಗುಣಮಟ್ಟ ತಿಳಿಯಲು ಪ್ರತಿ ರಾಜ್ಯದಲ್ಲಿಯೂ ಅಲ್ಲಿನ ಗುಣಮಟ್ಟದ ಮೌಲ್ಯಮಾಪನ ಪದ್ಧತಿಯನ್ನು ಜಾರಿಗೆ ತರಲು ಮುಂದಾಗಿದೆ.

ಕನ್ನಡ ಉಳಿಸಲು ಪಾಶ್ಚಾತ್ಯ ಶಿಕ್ಷಣದ ಗುಂಗಿನಿಂದ ಹೊರಬನ್ನಿ: ಕಂಬಾರ

1,000 ಅಂಕಗಳಿಗೆ ಮೌಲ್ಯಮಾಪನ ಮಾಡಲಾಗುತ್ತದೆ. ಇದಕ್ಕೆ ಒಟ್ಟು 70 ಮಾನದಂಡಗಳನ್ನು ಪರಿಗಣಿಸಲಾಗುತ್ತದೆ. ಆಯಾ ರಾಜ್ಯಗಳು ಗಳಿಸುವ ಅಂಕಗಳಿಗೆ ಅನುಗುಣವಾಗಿ ನಿಗದಿತ ಶ್ರೇಣಿ ನೀಡಲಾಗುತ್ತದೆ ಎಂದು ಎಚ್‌ಆರ್‌ಡಿ ಸಚಿವ ಪ್ರಕಾಶ್ ಜಾವಡೇಕರ್ ತಿಳಿಸಿದ್ದಾರೆ.

ಈ ಮೌಲ್ಯಮಾಪನ ಪದ್ಧತಿಯಿಂದ ಆಯಾ ರಾಜ್ಯಗಳಲ್ಲಿನ ಶಿಕ್ಷಣದ ಗುಣಮಟ್ಟದ ಬಗ್ಗೆ ಸ್ಪಷ್ಟ ಚಿತ್ರಣ ದೊರಕುತ್ತದೆ. ಅದರ ಆಧಾರದಲ್ಲಿ ಅವುಗಳಲ್ಲಿನ ಗುಣಮಟ್ಟವನ್ನು ಸುಧಾರಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ನೆರವಾಗುತ್ತದೆ. ಹಾಗೂ ಅಧಿಕ ಶ್ರೇಣಿ ಪಡೆದು ಸಾಧನೆ ಮಾಡಲು ರಾಜ್ಯಗಳ ನಡುವೆ ಸ್ಪರ್ಧಾತ್ಮಕ ಮನೋಭಾವ ಮೂಡಿಸಲು ಕೂಡ ಸಾಧ್ಯವಾಗುತ್ತದೆ ಎಂದಿದ್ದಾರೆ.

ಒಳ್ಳೆಸುದ್ದಿ: ಸರ್ಕಾರವೇ ಭರಿಸಲಿದೆ ಕಾಲೇಜು ವಿದ್ಯಾರ್ಥಿನಿಯರ ಶುಲ್ಕ

ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತಯ ತರಬೇತಿ ಮಂಡಳಿಯ (ಎನ್‌ಸಿಇಆರ್‌ಟಿ) ಪುಸ್ತಕಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಮುದ್ರಿಸಲು ಸಚಿವಾಲಯ ನಿರ್ಧರಿಸಿದೆ. ಪೋಷಕರಿಗೆ ಕಡಿಮೆ ಬೆಲೆಯಲ್ಲಿ ಗುಣಮಟ್ಟದ ಪುಸ್ತಕವನ್ನು ಖರೀದುಸವ ಹಕ್ಕಿದೆ. ಇದನ್ನು ಈಡೇರಿಸಲು ಪ್ರಸಕ್ತ ವರ್ಷ 6 ಕೋಟಿ ಪುಸ್ತಕಗಳನ್ನು ಮುದ್ರಣ ಮಾಡುವ ಗುರಿ ಹೊಂದಲಾಗಿದೆ. ಇದಕ್ಕೂ ಮೊದಲು ಎರಡು ವರ್ಷಗಳ ಹಿಂದೆ 2 ಕೋಟಿ ಪುಸ್ತಕಗಳನ್ನಷ್ಟೇ ಮುದ್ರಿಸಲಾಗಿತ್ತು ಎಂದು ವಿವರಿಸಿದ್ದಾರೆ.

ಶಾಲಾ ಪಠ್ಯಕ್ರಮದಲ್ಲಿಯೂ ಬದಲಾವಣೆ ಮಾಡುವ ಉದ್ದೇಶವಿದ್ದು, ದೈಹಿಕ ಶಿಕ್ಷಣ, ಮೌಲ್ಯಯುತ ಶಿಕ್ಷಣ, ಜೀವನಕೌಶಲ ಶಿಕ್ಷಣ ಮತ್ತು ಪ್ರಾಯೋಗಿಕ ಕಲಿಕೆಗೆ ಸಮಯ ಮೀಸಲಿರುವಂತೆ ಶಾಲಾ ಪಠ್ಯಕ್ರಮವನ್ನು ಪರಿಷ್ಕರಣೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

Leave A Reply

Your email address will not be published.