ಮಾರ್ಚ್ 1 ರಿಂದ ಆಗುಂಬೆ ಘಾಟ್‌ನಲ್ಲಿ ವಾಹನ ಸಂಚಾರ ನಿಷೇಧವಿಲ್ಲ

4,027

ಶಿವಮೊಗ್ಗ, ಫೆಬ್ರವರಿ 28 : ಆಗುಂಬೆ ಘಾಟ್‌ನಲ್ಲಿ ವಾಹನ ಸಂಚಾರವನ್ನು ನಿಷೇಧಿಸಿ ಹೊರಡಿಸಿದ್ದ ಆದೇಶವನ್ನು ಮುಂದೂಡಲಾಗಿದೆ. ಮಾರ್ಚ್ 1 ರಿಂದ 31ರ ತನಕ ವಾಹನ ಸಂಚಾರವನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿತ್ತು.

ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಎ.ದಯಾನಂದ ಅವರು ಈ ಕುರಿತು ಆದೇಶ ಹೊರಡಿಸಿದ್ದಾರೆ. ಆಗುಂಬೆ ಘಾಟ್ ರಸ್ತೆಯಲ್ಲಿ ಗುಡ್ಡ ಕುಸಿದಿರುವ ಕಾರಣ ಶಾಶ್ವತ ದುರಸ್ತಿ ಕಾರ್ಯ ಕೈಗೊಳ್ಳಬೇಕಾದ ಕಾರಣದಿಂದ ವಾಹನ ಸಂಚಾರ ನಿಷೇಧಿಸಲಾಗಿತ್ತು.

ದ್ವಿತೀಯ ಪಿಯುಸಿ ಪರೀಕ್ಷೆಗಳು ಇರುವ ಕಾರಣ ವಾಹನಗಳ ಸಂಚಾರಕ್ಕೆ ಹೇರಿದ್ದ ನಿಷೇಧವನ್ನು ಮುಂದೂಡಲಾಗಿದೆ. ಮಾರ್ಚ್ 19ರಿಂದ 30 ದಿನಗಳ ಕಾಲ ವಾಹನಗಳ ಸಂಚಾರವನ್ನು ನಿಷೇಧಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

ವಾಹನ ಸವಾರರು ಗೊಂದಲಕ್ಕೆ ಒಳಗಾಗಬೇಕಿಲ್ಲ. ರಾಷ್ಟ್ರೀಯ ಹೆದ್ದಾರಿ 169ಎ ಆಗುಂಬೆ ಘಾಟ್ ರಸ್ತೆಯಲ್ಲಿ ಮಾರ್ಚ್ 1 ರಿಂದ ವಾಹನಗಳು ಎಂದಿನಂತೆ ಸಂಚಾರ ನಡೆಸಲಿವೆ ಎಂದು ಜಿಲ್ಲಾಧಿಕಾರಿಗಳ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ…

Leave A Reply

Your email address will not be published.