ಕೋರ್ಟ್ ಮುಂದೆ ಮಧು ನಿಗೂಢ ಸಾವಿನ ಪ್ರಕರಣ ಆರೋಪಿ ಹಾಜರು

4,109

ರಾಯಚೂರು, ಮೇ 2- ಇಂಜಿನಿಯರಿಂಗ್ ವಿದ್ಯಾರ್ಥಿನಿ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಆರೋಪಿ ಸುದರ್ಶನ್ ಯಾದವ್‍ನನ್ನು ಸಿಐಡಿ ಅಧಿಕಾರಿಗಳು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.

ಏ.27ರಿಂದ ಐದು ದಿನಗಳ ಕಾಲ ಆರೋಪಿ ಸಿಐಡಿ ಕಸ್ಟಡಿಯಲ್ಲಿದ್ದು, ಅವಧಿ ಮುಗಿದ ಹಿನ್ನೆಲೆಯಲ್ಲಿ ಇಂದು ನ್ಯಾಯಾಲಯದ ಮುಂದೆ ಆರೋಪಿಯನ್ನು ಹಾಜರುಪಡಿಸಲಿರುವ ಅಧಿಕಾರಿಗಳು ಹೆಚ್ಚಿನ ತನಿಖೆಗೆ ಮತ್ತೆ ವಶಕ್ಕೆ ಪಡೆಯುವ ಸಾಧ್ಯತೆ ಇದೆ.

ಇಂಜಿನಿಯರಿಂಗ್ ವಿದ್ಯಾರ್ಥಿನಿ ಮಧು ಪತ್ತರ್ ಅವರ ಸಾವಿನ ಪ್ರಕರಣ ರಾಜ್ಯಾದ್ಯಂತ ತೀವ್ರ ಪ್ರತಿಭಟನೆಗೆ ಕಾರಣವಾಗಿತ್ತು. ರಾಯಚೂರು, ಬೆಂಗಳೂರು, ಹುಬ್ಬಳ್ಳಿ, ಧಾರವಾಡ ಸೇರಿದಂತೆ ವಿವಿಧೆಡೆ ವಿದ್ಯಾರ್ಥಿಗಳು, ನಾಗರಿಕ ಸಂಘಟನೆಗಳು ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಆಗ್ರಹಿಸಿ ಭಾರೀ ಪ್ರತಿಭಟನೆ ನಡೆಸಿದ್ದರು.

ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಿಐಡಿ ತನಿಖೆಗೆ ವಹಿಸಿತ್ತು. ಪ್ರಕರಣ ಸಂಬಂಧ ಸುದರ್ಶನ್ ಯಾದವ್ ಎಂಬ ಆರೋಪಿಯನ್ನು ಬಂಧಿಸಲಾಗಿತ್ತು. ಸಿಐಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಬಂಧಿತ ಆರೋಪಿಯ ಸಿಐಡಿ ಕಸ್ಟಡಿ ಅವಧಿ ಮುಗಿದಿದ್ದು, ಇಂದು ಮೂರನೆ ಜೆಎಂಎಫ್‍ಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದ್ದಾರೆ.

Leave A Reply

Your email address will not be published.