ರಾಜ್ಯ ಸರಕಾರಿ ನೌಕರರಿಗೆ ಸಿಹಿ ಸುದ್ದಿ : ಎಲ್ಲ ನೌಕರರಿಗೂ ‘ಆರೋಗ್ಯ ಭಾಗ್ಯ ಯೋಜನೆ’ ವಿಸ್ತರಣೆ

4,699

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರದಿಂದ ಗುಡ್ ನ್ಯೂಸ್ ಹೊರಬಿದ್ದಿದೆ. ಆರೋಗ್ಯ ಭಾಗ್ಯ ಯೋಜನೆಯನ್ನು ಸರ್ಕಾರಿ ನೌಕರರಿಗೂ ವಿಸ್ತರಿಸಲು ಸರ್ಕಾರ ಮುಂದಾಗಿದೆ. ರಾಜ್ಯ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದ ಅವಲಂಭಿತರು ಆಸ್ಪತ್ರೆ ಚಿಕಿತ್ಸೆಗೆ ಮಾಡಿದ ವೆಚ್ಚವನ್ನು ಮರುಪಾವತಿ ಪಡೆಯಲು ವರ್ಷಗಟ್ಟಲೇ ವಿಳಂಬ ಆಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ.

ಪ್ರಸ್ತುತ ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಆರೋಗ್ಯ ಭಾಗ್ಯ ಯೋಜನೆ ಜಾರಿಯಲ್ಲಿದೆ. ಇನ್ನು ಮುಂದೆ ಸರ್ಕಾರಿ ನೌಕರರಿಗೂ ಈ ಯೋಜನೆಯ ಲಾಭ ದೊರೆಯಲಿದೆ. ಈ ಕುರಿತಂತೆ ವಿವರವಾದ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸುವಂತೆ ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ. ರಾಜ್ಯ ಸರಕಾರಿ ನೌಕರರ ಸಂಘದ ನಾನಾ ಜಿಲ್ಲೆಗಳ ಮನವಿ ಆಧರಿಸಿ ಸಿಎಂ ಅವರು ಸೋಮವಾರ ಸಂಜೆ ಈ ಸಂಬಂಧ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚನೆ ನೀಡಿದ್ದಾರೆ. ಅದರಂತೆ 15 ಲಕ್ಷಕ್ಕೂ ಅಧಿಕ ಸರಕಾರಿ ನೌಕರರಿಗೆ ಪ್ರಯೋಜನವಾಗಲಿದೆ.

ರಾಜ್ಯ ಸರಕಾರಿ ನೌಕರರು ಹಾಗೂ ಅವರ ಕುಟುಂಬ ವರ್ಗದವರ ಚಿಕಿತ್ಸೆ ಮತ್ತು ವೈದ್ಯ ವೆಚ್ಚ ಪಾವತಿಸಲು ವರ್ಷಗಟ್ಟಲೇ ವಿಳಂಬವಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಿಯಮ ಪರಿವರ್ತನೆ ಮಾಡಬೇಕೆಂದು ಸರಕಾರಿ ನೌಕರರ ಸಂಘ ಮನವಿ ಮಾಡಿತ್ತು. ಹಾಗಾಗಿ ಆರೋಗ್ಯ ಭಾಗ್ಯವನ್ನು ಎಲ್ಲ ಸರಕಾರಿ ನೌಕರರಿಗೂ ವಿಸ್ತರಿಸಲು ನಿರ್ಧರಿಸಲಾಗಿದೆ.

Leave A Reply

Your email address will not be published.