ಬ್ರೇಕಿಂಗ್ ನ್ಯೂಸ್: ಸಂಚಾರಿ ನಿಯಮ ಉಲ್ಲಂಘನೆ ದಂಡ ಮೊತ್ತ ಕಡಿತ

4,821

ಬೆಂಗಳೂರು, ಸೆಪ್ಟೆಂಬರ್ 11 : ಮೋಟಾರು ವಾಹನ ತಿದ್ದುಪಡಿ ಕಾಯ್ದೆ 2019 ಜಾರಿಗೆ ಬಂದ ಬಳಿಕ ದಂಡ ಮೊತ್ತದ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ. ಕರ್ನಾಟಕದಲ್ಲಿ ದಂಡ ಮೊತ್ತ ಕಡಿಮೆ ಮಾಡಲು ಸಾರಿಗೆ ಇಲಾಖೆ ಚಿಂತನೆ ನಡೆಸಿದೆ.

ಸಂಚಾರಿ ನಿಯಮ ಉಲ್ಲಂಘನೆಗೆ ಭಾರಿ ಮೊತ್ತದ ದಂಡ ವಿಧಿಸುವ ಮೋಟಾರು ವಾಹನ ತಿದ್ದುಪಡಿ ಕಾಯ್ದೆ 2019 ಸೆಪ್ಟೆಂಬರ್ 1 ರಿಂದ ದೇಶಾದ್ಯಂತ ಜಾರಿಗೆ ಬಂದಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಲಕ್ಷಾಂತರ ರೂಪಾಯಿ ದಂಡ ಸಂಗ್ರಹವಾಗಿದೆ.

ಸಂಚಾರಿ ನಿಯಮ ಉಲ್ಲಂಘನೆ; ರಾಜ್ಯ ಸರ್ಕಾರದಿಂದ ದಂಡ ಮೊತ್ತ ಕಡಿತ

ಸಂಚಾರಿ ನಿಯಮ ಉಲ್ಲಂಘನೆಗೆ ದುಬಾರಿ ದಂಡ ವಿಧಿಸುವ ಬಗ್ಗೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ಸರ್ಕಾರವೂ ಈ ಕುರಿತು ಗಂಭೀರವಾದ ಚಿಂತನೆ ನಡೆಸಿತ್ತು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ದಂಡ ಮೊತ್ತ ಕಡಿಮೆ ಮಾಡಿ ಎಂದು ಸರ್ಕಾರವನ್ನು ಆಗ್ರಹಿಸಿದ್ದರು.

ದಂಡ ಮೊತ್ತ ಹೆಚ್ಚಳ; ಪೆಟ್ರೋಲ್ ಸ್ಥಗಿತಗೊಳಿಸುವ ಎಚ್ಚರಿಕೆ

ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ರಾಜ್ಯದಲ್ಲಿ ದಂಡ ಮೊತ್ತ ಕಡಿಮೆ ಮಾಡುವುದಾಗಿ ಮಂಗಳವಾರ ಘೋಷಣೆ ಮಾಡಿದ್ದರು. ಕರ್ನಾಟಕ ಸರ್ಕಾರ ಇಂದು ದಂಡದ ಮೊತ್ತವನ್ನು ಕಡಿಮೆ ಮಾಡುವತ್ತ ಗಮನಹರಿಸಿದೆ.

ದೇಶದಲ್ಲೇ ಅತಿ ಹೆಚ್ಚು ದಂಡ ಬಿದ್ದ ದಾಖಲೆ ಒಡಿಶಾ ಟ್ರಕ್ ಡ್ರೈವರ್ ಗೆ!ದಂಡ ಶುಲ್ಕ ಕಡಿಮೆ
ಬಸವರಾಜ್ ಬೊಮ್ಮಾಯಿ ಮನವಿ

ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ದಂಡ ಶುಲ್ಕ ಕಡಿಮೆ ಮಾಡುವಂತೆ ಮನವಿ ಮಾಡಿದ್ದರು. ಈ ಮನವಿಯನ್ನು ಪರಿಗಣಿಸಿರುವ ಅಧಿಕಾರಿಗಳು ಶುಲ್ಕ ಕಡಿತಕ್ಕೆ ಮುಂದಾಗಿದ್ದಾರೆ.

ಅಧಿಕಾರಿಗಳ ಸಭೆ
ಎಷ್ಟು ಕಡಿತವಾಗಲಿದೆ ದಂಡ?

ಸಾರಿಗೆ ಇಲಾಖೆ ಅಧಿಕಾರಿಗಳು ಶೀಘ್ರದಲ್ಲಿಯೇ ಸಭೆ ನಡೆಸಲಿದ್ದು ದಂಡ ಶುಲ್ಕವನ್ನು ಎಷ್ಟು ಕಡಿಮೆ ಮಾಡಬೇಕು? ಎಂದು ತೀರ್ಮಾನ ಕೈಗೊಳ್ಳಲಿದ್ದಾರೆ. ಗುಜರಾತ್‌ನಲ್ಲಿ ಹೆಲ್ಮೆಟ್ ರಹಿತ ಪ್ರಯಾಣಕ್ಕೆ ಇರುವ ದಂಡವನ್ನು 2000 ದಿಂದ 500ಕ್ಕೆ, ಡಿಎಲ್ ಇಲ್ಲದ ಪ್ರಯಾಣಕ್ಕೆ 5000 ರಿಂದ 2 ಸಾವಿರಕ್ಕೆ ಇಳಿಸುವ ಪ್ರಸ್ತಾವನೆ ಸಿದ್ಧಪಡಿಸಲಾಗಿದೆ.

ದಂಡ ಮೊತ್ತ ಇಳಿಸಿ
ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು

ಸಂಚಾರಿ ನಿಯಮ ಉಲ್ಲಂಘನೆಗೆ ವಿಧಿಸುತ್ತಿರುವ ದಂಡ ಮೊತ್ತ ಅಧಿಕವಾಗಿದೆ. ಇದನ್ನು ಕಡಿಮೆ ಮಾಡಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರವನ್ನು ಆಗ್ರಹಿಸಿ ಟ್ವೀಟ್ ಮಾಡಿದ್ದರು.

Leave A Reply

Your email address will not be published.